ದ್ವಿಭಾಷಾ ಫಾಂಟ್ ಬಗ್ಗೆ ಕರ್ನಾಟಕ ಸರಕಾರಕ್ಕೆ ನನ್ನ ಪತ
Saturday, June 14th, 2008ಕರ್ನಾಟಕ ಸರಕಾರವು ದ್ವಿಭಾಷಾ ಫಾಂಟ್ (bilingual font) ಗೆ ಸಂಕೇತಗಳನ್ನು ನಿಗದಿಪಡಿಸಲು ಹೊರಟಿದ್ದು ನಿಮಗೆ ತಿಳಿದಿರಬಹುದು. ಸರಕಾರಕ್ಕೆ ನಾನು ಬರೆದ ಪತ್ರ ಇಲ್ಲಿದೆ –
ಕರ್ನಾಟಕ ಸರಕಾರವು ದ್ವಿಭಾಷಾ ಫಾಂಟ್ (bilingual font) ಗೆ ಸಂಕೇತಗಳನ್ನು ನಿಗದಿಪಡಿಸಲು ಹೊರಟಿದ್ದು ನಿಮಗೆ ತಿಳಿದಿರಬಹುದು. ಸರಕಾರಕ್ಕೆ ನಾನು ಬರೆದ ಪತ್ರ ಇಲ್ಲಿದೆ –
ಕರ್ನಾಟಕ ಸರಕಾರದ ನೀತಿಯೇನೆಂದರೆ ಜಗತ್ತೆಲ್ಲ ಮುಂದೆ ಮುಂದೆ ಸಾಗುತ್ತಿರಲಿ, ನಾನೊಬ್ಬ ಮಾತ್ರ ಹಿಂದೆ ಹಿಂದೆ
ಮೈಕೇಲ್ ಕಪ್ಲಾನ್ ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ತಂತ್ರಾಂಶಗಳ ಜಾಗತೀಕರಣ ವಿಭಾಗದಲ್ಲಿ ಪ್ರಮುಖ ಹುದ್ದೆಯಲ್ಲಿರುವ ತಂತ್ರಜ್ಞರು. ತಂತ್ರಾಂಶ ಜಾಗತೀಕರಣ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಮಾತ್ರವಲ್ಲದೆ ಈ ವಿಷಯದಲ್ಲಿ ಆಸಕ್ತಿ ಹೊಂದಿರುವ ಎಲ್ಲರಿಗೂ ಇವರ ಹೆಸರು ಪರಿಚಯವಿದೆ. ಇವರು ಭಾರತಕ್ಕೆ ಬರುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿರುವ ಮೈಕ್ರೋಸಾಫ್ಟ್ ಸಂಶೋದನಾ ಕೇಂದ್ರದ ಮೂಲಕ ತಿಳಿದು ಬಂತು. ಕೂಡಲೇ ನಾನು ಕಪ್ಲಾನರನ್ನು ಸಂಪರ್ಕಿಸಿ ನಮ್ಮ ಬೆಂಗಳೂರಿನ ಡಾಟ್‌ನೆಟ್ ಬಳಕೆದಾರರ ಸಂಘದಲ್ಲಿ ಒಂದು ಭಾಷಣ ನೀಡಲು ಸಾಧ್ಯವೇ ಎಂದು ಕೇಳಿಕೊಂಡೆ. ಕೂಡಲೇ ಅವರಿಂದ ಉತ್ತರ ಬಂತು “ಇದು ನನಗೆ ನೀಡುತ್ತಿರುವ ಗೌರವ ಎಂದು ಭಾವಿಸಿಕೊಂಡು ಒಪ್ಪಿಗೆ ನೀಡುತ್ತಿದ್ದೇನೆ”.
ಮೊಬೈಲ್ ಫೋನುಗಳಲ್ಲಿ ಎಸ್‌ಎಂಎಸ್ ಮಾಡುವಾಗ ಎಲ್ಲರೂ ಕಂಗ್ಲಿಶ್ ಬಳಸುವುದು ಸಹಜವಾಗಿಬಿಟ್ಟಿದೆ. ಇದರಿಂದಾಗಿ ಎಫ್‌ಎಂ ರೇಡಿಯೋ ಚಾನೆಲುಗಳಿಗೆ ಕಳುಹಿಸಿದ ಸಂದೇಶಗಳನ್ನು ಓದುವಾಗ ಅಲ್ಲಲ್ಲಿ ತಡವರಿಸುತ್ತಾರೆ. ಕೆಲವೊಮ್ಮೆ ಸಂದೇಶ ಮತ್ತು ಹೆಸರುಗಳನ್ನು ಓದುವಾಗ ತಪ್ಪುಗಳೂ ಸಂಭವಿಸುತ್ತವೆ. ಉದಾಹರಣೆಗೆ ಸಂದೇಶ ಕಳುಹಿಸಿದವರು ತಮ್ಮ ಹೆಸರನ್ನು rama ಎಂದು ಬೆರಳಚ್ಚು ಮಾಡಿದ್ದಾರೆಂದಿಟ್ಟುಕೊಳ್ಳಿ. ಇದು ರಾಮ ಅಥವಾ ರಮಾ ಇರಬಹುದು. ಕನ್ನಡದಲ್ಲೇ ಸಂದೇಶ ಕಳುಹಿಸಿದರೆ ಈ ಗಲಿಬಿಲಿ ಇರುವುದಿಲ್ಲ. ಆದರೆ ಸದ್ಯಕ್ಕೆ ಯಾವ ಮೊಬೈಲ್ ಫೋನುಗಳಲ್ಲೂ ಈ ಸೌಲಭ್ಯವಿಲ್ಲ. ಮೊಬೈಲ್ ತಂತ್ರಾಂಶಗಳಿಗೂ ಈ ಮಾತು ಅನ್ವಯಿಸುತ್ತದೆ. ಆದರೆ ಈ ಸಮಸ್ಯೆಗೆ ಪರಿಹಾರ ಇದೆ. ಬೆಂಗಳೂರಿನ ಹಸ್ತ ಸೊಲುಶನ್ಸ್ ಕಂಪೆನಿ ಮೊಬೈಲ್ ಫೋನುಗಳಿಗೆ ಭಾರತೀಯ ಭಾಷೆಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದೆ. ಕನ್ನಡವೂ ಈ ಪಟ್ಟಿಯಲ್ಲಿದೆ. ಕನ್ನಡ ಭಾಷೆಯನ್ನು ಅಳವಡಿಸುವುದೆಂದರೆ ಕೇವಲ ಕನ್ನಡದಲ್ಲಿ ಬೆರಳಚ್ಚು ಮಾಡುವುದಲ್ಲ. ಕನ್ನಡದ ತಂತ್ರಾಂಶಗಳು ತಯಾರಾಗಿವೆ. ಭೂಮಿ ತಂತ್ರಾಂಶಕ್ಕೆ ಬೆಳೆಗಳ ವಿವರ ಸೇರಿಸುವುದು, ಅಂಗನವಾಡಿ ಕಾರ್ಯಕರ್ತರು ತಾವು ಸಂಗ್ರಹಿಸಿದ ಮಾಹಿತಿಗಳನ್ನು ಊಡಿಸುವುದು, ಮತ್ತು ಇನ್ನೂ ಒಂದೆರಡು ಕನ್ನಡದ ಆನ್ವಯಿಕ ತಂತ್ರಾಂಶಗಳನ್ನು ಈ ಕಂಪೆನಿ ಅಭಿವೃದ್ಧಿಪಡಿಸಿದೆ. ಜಗತ್ತಿನ ತಂತ್ರಾಂಶ ದೈತ್ಯ ಮೈಕ್ರೋಸಾಫ್ಟ್ ಕಂಪೆನಿ ಭಾರತೀಯ ಭಾಷೆಗಳನ್ನು ಮೊಬೈಲ್ ಫೋನುಗಳಲ್ಲಿ ಅಳವಡಿಸುವತ್ತ ಏನೂ ಕೆಲಸ ಮಾಡಿಲ್ಲ. ಇಂತಹ ಸಂದರ್ಭದಲ್ಲಿ ನಮ್ಮವರದೇ ಕಂಪೆನಿ ಹಸ್ತ ಸೊಲುಶನ್ಸ್ ಕನ್ನಡವನ್ನು ಮೊಬೈಲ್ ಫೋನಿನಲ್ಲಿ ಅಳವಡಿಸಿದೆ. ಸರಕಾರವು ಇವರಿಗೆ ಪ್ರೋತ್ಸಾಹ ನೀಡಬೇಕಾಗಿದೆ.
ದಯವಿಟ್ಟು ಈ ಪುಟ ಓದಿ –http://vishvakannada.com/node/338. ಅದರ ಕೊನೆಯಲ್ಲಿ ಬರುವ ಒಂದು ಸಂಭಾಷಣೆಯ ಕಡೆಗೆ ಸ್ವಲ್ಪ ಜಾಸ್ತಿ ಗಮನ ಕೊಡಿ.
ಮೊಬೈಲ್ ಫೋನು ಬಳಸುವಾಗ ತುಂಬ ಹೊತ್ತು ಮಾತನಾಡಿದರೆ ಕಿವಿ ಬಿಸಿಯಾಗುವುದು ಗೊತ್ತಿದೆ ತಾನೆ? ಇದಕ್ಕೆ ಪರಿಹಾರವಾಗಿ ಹೆಚ್ಚಿನ ಮಂದಿ ಇಯರ್‌ಫೋನ್ ಬಳಸುವುದೂ ಗೊತ್ತಿರಬಹುದು. ಈ ಇಯರ್‌ಫೋನುಗಳಲ್ಲಿ ಎರಡು ವಿಧ -ತಂತಿ ಮೂಲಕ ಸಂಪರ್ಕಿಸುವಂತಹುದು ಮತ್ತು ನಿಸ್ತಂತು. ನಿಸ್ತಂತು ಇಯರ್‌ಫೋನುಗಳು ಸಾಮಾನ್ಯವಾಗಿ ಬ್ಲೂಟೂತ್ ವಿಧಾನ ಮೂಲಕ ಫೋನಿಗೆ ಸಂಪರ್ಕ ಸಾಧಿಸುತ್ತವೆ. ಬ್ಲೂಟೂತ್ ಇಯರ್‌ಫೋನುಗಳಲ್ಲಿ ಕೂಡ ಮುಖ್ಯವಾಗಿ ಎರಡು ವಿಧ -ಮೋನೋ ಮತ್ತು ಸ್ಟೀರಿಯೋ. ಮೋನೋ ಇಯರ್‌ಫೋನುಗಳನ್ನು ತುಂಬ ಮಂದಿ ಬಳಸುತ್ತಾರೆ. ಇವುಗಳನ್ನು ಸಾಮನ್ಯವಾಗಿ ಕಿವಿಗೆ ಜೋಡಿಸಿರುತ್ತಾರೆ. ಇವುಗಳನ್ನು ಮಾತನಾಡಲು ಮಾತ್ರ ಬಳಸಬಹುದು. ಸಂಗೀತ ಆಲಿಸಲು ಇವು ಉಪಯುಕ್ತವಲ್ಲ. ಸಂಗೀತ ಆಲಿಸಲು ಸ್ಟೀರಿಯೋ ಇಯರ್‌ಫೋನೇ ಉತ್ತಮ. ಸ್ಟೀರಿಯೋ ಬ್ಲೂಟೂತ್ ಇಯರ್‌ಫೋನಿಗೆ ಒಂದು ಉದಾಹರಣೆ ಮೋಟೊರೋಲ ಕಂಪೆನಿಯ ಎಸ್-೭೦೫.
ಈ ಸಲದ ರಾಜ್ಯೋತ್ಸವ ಪ್ರಶಸ್ತಿಗೆ ಒಂದು ವೈಶಿಷ್ಟ್ಯವಿದೆ. ಸರಕಾರವಿಲ್ಲದೆ ಯಾವುದೇ ರಾಜಕಾರಣಿಯ ವಶೀಲಿಯಿಲ್ಲದೆ ನೀಡಿದ ಪ್ರಶಸ್ತಿಯಿದು. ಈ ಸಲದ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪನವರು. ಹೀಗಾಗಿ ಈ ಸಲದ ಪ್ರಶಸ್ತಿಗೆ ಭಾಜನರಾದವರ ಹೆಸರುಗಳಿಗೆ ಯಾವುದೇ ಕಳಂಕವಿಲ್ಲ.
ಮೈಕ್ರೋಸಾಫ್ಟ್ ಕಂಪೆನಿ ತಂತ್ರಾಂಶ (ಸಾಫ್ಟ್ವೇರ್) ತಯಾರಿಕೆಗೆ ಜಗತ್ಪ್ರಸಿದ್ಧ. ಅವರು ಕೆಲವು ಯಂತ್ರಾಂಶಗಳನ್ನೂ (ಹಾರ್ಡ್ವೇರ್) ತಯಾರಿಸುತ್ತಾರೆ. ಅವುಗಳಲ್ಲಿ ಮೌಸ್ಗಳು ಹೆಚ್ಚು ಜನಪ್ರಿಯ. ಮೈಕ್ರೋಸಾಫ್ಟ್ ಮೌಸ್ಗಳ ಪಟ್ಟಿಗೆ ಇತ್ತೀಚೆಗೆ ಆದ ಸೇರ್ಪಡೆ ವೈರ್ಲೆಸ್ ನೋಟ್ಬುಕ್ ಲೇಸರ್ ಮೌಸ್8000. ಇದು ಕೇವಲ ಮೌಸ್ ಅಲ್ಲ. ಇದನ್ನು ಬಳಸಿ ಪವರ್ಪಾಯಿಂಟ್ ಪ್ರೆಸೆಂಟೇಶನ್ಗಳ ದೂರನಿಯಂತ್ರಣ ಮಾಡಬಹುದು. ಅಷ್ಟು ಮಾತ್ರವಲ್ಲ ವಿಂಡೋಸ್ ಮೀಡಿಯಾ ಪ್ಲೇಯರನ್ನು ಕೂಡ ನಿಯಂತ್ರಿಸಬಹುದು.
ಮೊಬೈಲ್ ಫೋನುಗಳಲ್ಲಿ ಮೇಲ್ದರ್ಜೆಯವುಗಳಲ್ಲಿ ಅಂತರಜಾಲ ಸಂಪರ್ಕ, ವಿ-ಅಂಚೆ ಇತ್ಯಾದಿ ಸೌಕರ್ಯಗಳಿರುತ್ತವೆ. ಇಂತಹ ಫೋನುಗಳಲ್ಲಿ ವಿಂಡೋಸ್ ಕಾರ್ಯಾಚರಣ ವ್ಯವಸ್ಥೆಯನ್ನು ಹೊಂದಿರುವ ಫೋನುಗಳು ಇತ್ತೀಚೆಗಿನ ದಿನಗಳಲ್ಲಿ ಜನಪ್ರಿಯವಾಗುತ್ತಿವೆ. ಅಂತರಜಾಲದಲ್ಲಿ ಇಂತಹ ಫೋನುಗಳಿಗೆ ಹಲವಾರು ಉಚಿತ ತಂತ್ರಾಂಶಗಳು ಲಭ್ಯವಾಗಿರುವುದು ಮತ್ತು ತಂತ್ರಾಂಶ ಪರಿಣತರಾಗಿದ್ದಲ್ಲಿ ತಾವೇ ಈ ಫೋನುಗಳಿಗೆ ತಂತ್ರಾಂಶ ತಯಾರಿಸುವ ಸವಲತ್ತುಗಳಿರುವುದೂ ಈ ಫೋನುಗಳು ಜನಪ್ರಿಯವಾಗುತ್ತಿರುವುದಕ್ಕೆ ಕಾರಣಗಳು. ಇಂತಹ ಫೋನುಗಳು ಹಲವು ಕಂಪೆನಿಗಳ ಹೆಸರಿನಲ್ಲಿ ಲಭ್ಯವಿವೆ. ಅವುಗಳೆಂದರೆ O2, iMate, HTC ಇತ್ಯಾದಿ. ಈ ಎಲ್ಲ ಹೆಸರುಗಳಲ್ಲಿ ಅವು ಲಭ್ಯವಿದ್ದರೂ ಈ ಎಲ್ಲ ಫೋನುಗಳನ್ನು ತಯಾರಿಸುವ ಕಂಪೆನಿ ಒಂದೇ -ಅದುವೇ ಎಚ್‌ಟಿಸಿ. ಮೊದಲು ಎಚ್‌ಟಿಸಿ ಕಂಪೆನಿ ಇತರರಿಗೆ ಮಾತ್ರ ಈ ಫೋನುಗಳನ್ನು ತಯಾರಿಸುತ್ತಿತ್ತು. ಇತ್ತೀಚೆಗಷ್ಟೆ ಅದು ತನ್ನ ಹೆಸರಿನಲ್ಲೆ ಇವುಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದೆ. ಅವುಗಳಲ್ಲಿ ನಮ್ಮ ದೇಶದಲ್ಲಿ ಲಭ್ಯವಿರುವ ಮತ್ತು ತುಂಬ ಸುದ್ದಿ ಮಾಡುತ್ತಿರುವ ಫೋನು ಎಚ್‌ಟಿಸಿ ಟಚ್. ಏನಿದೆ ಇದರಲ್ಲಿ?
ಕೆಲವು ಕಂಪೆನಿಗಳಿವೆ ಏನು ಮಾಡಿದರೂ ಸುದ್ದಿಯಾಗುತ್ತದೆ. ಈ ಪಟ್ಟಿಯಲ್ಲಿ ಆಪಲ್ ಕಂಪೆನಿಯ ಹೆಸರೂ ಸೇರಿದೆ. ಆಪಲ್ ಕಂಪೆನಿ ಒಂದು ಕಾಲದಲ್ಲಿ ವೈಯಕ್ತಿಕ ಗಣಕಗಳು (ಪರ್ಸನಲ್ ಕಂಪ್ಯೂಟರ್) ಮನೆಮಾತಾಗುವಂತೆ ಮಾಡಿದ ಕಂಪೆನಿ. ಐಬಿಎಂ ಮತ್ತು ಮೈಕ್ರೋಸಾಫ್ಟ್ನವರ ಹೊಡೆತದಿಂದಾಗಿ ತತ್ತರಿಸಿ, ಇನ್ನೇನು ಬಾಗಿಲು ಹಾಕಬೇಕೆಂದುಕೊಂಡಿದ್ದಾಗ ಐಪ್ಯಾಡ್ ಮೂಲಕ ಮತ್ತೆ ಚೇತರಿಸಿಕೊಂಡಿತು. ಎಂಪಿ-3 ಪ್ಲೇಯರ್ಗಳ ಲೋಕದಲ್ಲಿ ಐಪ್ಯಾಡ್ ತುಂಬ ಖ್ಯಾತಿಯನ್ನು ಹೊಂದಿದೆ. ಈ ಖ್ಯಾತಿಯನ್ನೇ ಬಂಡವಾಳವನ್ನಾಗಿಸಿಕೊಂಡು ಆಪಲ್ ಕಂಪೆನಿ ಇತ್ತೀಚೆಗೆ ಐಫೋನ್ ಎಂಬ ಹೆಸರಿನ ಮೊಬೈಲ್ ಫೋನ್ ತಯಾರಿಸಿ ಅಮೆರಿಕಾದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.