ಡಾ| ಯು. ಬಿ. ಪವನಜ
‘ಋಷಿವಾಕ್ಯದೊಡನೆ ವಿಜ್ಞಾನ ಕಲೆ ಮೇಳವಿಸೆ ಜಸವು ಜನಜೀವನಕೆ' ಎಂದು ಡಿವಿಜಿಯವರು ತಮ್ಮ ಮಂಕುತಿಮ್ಮನ ಕಗ್ಗದಲ್ಲಿ ಹೇಳಿದ್ದಾರೆ. ಸಹಸ್ರಾರು ವರ್ಷಗಳಿಂದ ಭಾರತೀಯರು ತಮ್ಮ ‘ಜ್ಞಾನ'ಕ್ಕೆ ವಿಶ್ವವಿಖ್ಯಾತರಾಗಿದ್ದಾರೆ. ವಿಜ್ಞಾನದ ವಿಷಯ ಬಂದಾಗ ಇತ್ತೀಚಿನ ಎರಡು ಶತಮಾನಗಳಲ್ಲಿ ವಿದೇಶೀಯರು ನಮ್ಮನ್ನು ಹಿಂದೆಹಾಕಿ ಬಹುಮುಂದೆ ಹೋಗಿರುವುದು ಸತ್ಯ. ಇದಕ್ಕೆ ಮುಖ್ಯ ಕಾರಣ ನಾವು ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ವಿಜ್ಞಾನವನ್ನು ವಿವರಿಸಲು ವಿಶೇಷ