ಆರೋಗ್ಯದ ಲೇಖನಗಳು

ನಾರು-ಬೇರುಗಳು ಏನು ಈ ನಾರು-ಬೇರುಗಳು ? ಕಾರ್ಬೋಹೈಡ್ರೇಟ್ ನಲ್ಲಿ ಎರಡು ವಿಧ. ಒಂದು, ದೊರಕುವ ಕಾರ್ಬೋಹೈಡ್ರೇಟ್ (ಅವೈಲಬಲ್), ಮತ್ತೊಂದು, ದೊರಕದ ಕಾರ್ಬೋಹೈಡ್ರೇಟ್(ಅನ್ ಅವೈಲಬಲ್), ದೊರಕುವ ಕಾರ್ಬೋಹೈಡ್ರೇಟ್-ಶರ್ಕರ ಪಿಷ್ಟ, ನಾರು-ಬೇರುಗಳು ದೊರಕದ ಕಾರ್ಬೋಹೈಡ್ರೇಟ್ ಗಳು. ಸಸ್ಯಗಳಲ್ಲಿನ ಜೀವಕಣತಂತುಕ(ಸೆಲ್ಯೂಲೋಸ್), ಅರೆಜೀವಕಣತಂತುಕ(ಹೆಮಿಸೆಲ್ಯೂಲೋಸ್), ಹಣ್ಣಂಟು(ಪೆಕ್ಟಿನ್), ಸಸ್ಯಗೋಂದು(ಪ್ಲಾಂಟ್ ಗಂ)-ಇವೆಲ್ಲಾ ಸೇರಿ ನಾರು-ಬೇರುಗಳಾಗುತ್ತವೆ. ಇವುಗಳಲ್ಲಿ ಎರಡು ವಿಧ. ನೀರಿನಲ್ಲಿ ಕರಗುವ ನಾರು_ಬೇರುಗಳು, ನೀರಿನಲ್ಲಿ ಕರಗದ ನಾರು-ಬೇರುಗಳು, ಹುಳಿ ಹಣ್ಣುಗಳ ನಾರು, ಅಕ್ಕಿಯ ಮೇಲಿನ ಹೊಟ್ಟಿನ ಭಾಗ, ಸೇಬಿನ ನಾರು ಇತ್ಯಾದಿಗಳು ನೀರಿನಲ್ಲಿ ಕರಗುತ್ತವೆ. ಉಳಿದವು ನೀರಿನಲ್ಲಿ ಕರಗುವುದಿಲ್ಲ. ಶರೀರಕ್ಕೆ ಎರಡೂ ಬೇಕು. ಹೆಗ್ಗರುಳಿನ ಕ್ಯಾನ್ಸರ್(ಕೊಲೋನ್ ಕ್ಯಾನ್ಸರ್), ಮೂಲವ್ಯಾಧಿ, ಸಕ್ಕರೆ ಕಾಯಿಲೆ, ಮಲಬದ್ಧತೆ, ಜಠರದ ಹುಣ್ಣು, ಅಧಿಕ ರಕ್ತದೊತ್ತಡ, ಅಪೆಂಡಿಸೈಟಿಸ್, ಅಧಿಕ ಕೊಲೆಸ್ಟ್ರಾಲ್, ಪಿತ್ತಕೋಶದಲ್ಲಿ ಕಲ್ಲು, ಬೊಜ್ಜು, ಹೃದಯಾಘಾತ – ಏನು ಇಷ್ಟೊಂದು ದೊಡ್ಡ ಕಾಯಿಗಳ ಪಟ್ಟಿ? ಏಕೆ ಈ ಪಟ್ಟಿ? – ಇವೆಲ್ಲಕ್ಕೂ ಒಂದೇ ಕಾರಣ, ರೋಗಿಯ ಆಹಾರದಲ್ಲಿ ನಾರು-ಬೇರುಗಳ ಅಂಶ ಕಡಿಮೆ. ನಾರು-ಬೇರುಗಳು, ಮೇಲಿನ ಕಾಯಿಲೆಗಳಲ್ಲಿ ಹೇಗೆ ಸಹಾಯ ಮಾಡುತ್ತವೆ? ೧) ನಾರು-ಬೇರುಗಳು ದೊಡ್ಡಕರುಳಿನಲ್ಲಿನ ನೀರನ್ನು ಹೀರಿ ಮಲವು ಉಬ್ಬುವಂತೆ ಮಾಡುತ್ತವೆ. ಅದರ ಮೇಲೆ ಏಕಾಣುಜೀವಿಗಳು(ಬ್ಯಾಕ್ಟೀರಿಯಾ) ತಮ್ಮ ಕ್ರಿಯೆಯಿಂದ ಅದನ್ನು ಹಾಲಂದೀಕರಿಸಿ(ಎಮಲ್ಸಿಪ್ಫ಼ೈಡ್) ವಾಯುವನ್ನು ಬಿಡುಗಡೆ ಮಾದಿ ಮಲವನ್ನು ಮೃದು ಮಾಡುತ್ತವೆ. ೨) ದೊಡ್ಡಕರುಳಿನ ಮಲದಲ್ಲಿ ಕೆಲವು ಕ್ಯಾನ್ಸರ್ ಕಾರಕ ವಸ್ತುಗಳು ಕಂಡುಬಂದವು. ಅದಕ್ಕೆ ಕಾರಣ ದೊಡ್ಡಕರುಳಿನ ಕಡಿಮೆ ಆಮ್ಲೀಯತೆ. ಆಮ್ಲೀಯತೆ ಹೆಚ್ಚಾದಲ್ಲಿ ಈ ಕ್ಯಾನ್ಸರ್ ಕಾರಕಗಳು ಕಡಿಮೆಯಾದವು. ನಾರು-ಬೇರುಗಳ ಮೇಲಿನ ಏಕಾಣುಜೀವಿಗಳ ಕ್ರಿಯೆ ಆಮ್ಲೀಯತೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಏಕಾನುಜೀವಿಗಳು ವೃದ್ಧಿಯಾಗಲು ಸಾರಜನಕ ಬೇಕು. ಅವು ದೊಡ್ಡಕರುಳಿನಲ್ಲಿನ ಸಾರಜನಕವನ್ನು ಉಪಯೋಗಿಸಿಕೊಂಡರೆ ಅಮೋನಿಯಾ ಕಡಿಮೆಯಾಗುತ್ತದೆ. ಅಮೋನಿಯಾ ಹೆಚ್ಚಾಗಿದ್ದರೆ ಕ್ಯಾನ್ಸರ್ ಹೆಚ್ಚುತ್ತಿತ್ತು. ಹೀಗೆ ನಾರು-ಬೇರುಗಳು ಆಮ್ಲೀಯತೆಯನ್ನು ಹೆಚ್ಚಿಸಿ, ಅಮೋನಿಯಾವನ್ನು ತಗ್ಗಿಸಿ ಹೆಗ್ಗರುಳಿನ ಕ್ಯಾನ್ಸರನ್ನು ತಡೆಗಟ್ಟುತ್ತವೆ. ೩) ಹೆಗ್ಗರುಳಿನ ಸುತ್ತುಸರಿಕ ಕ್ರಿಯೆಗೆ(ಪೆರಿಸ್ಟಾಲ್ಟಿಕ್ ಮೋಷನ್) ನಾರು-ಬೇರುಗಳು ಸಹಾಯಮಾಡುತ್ತವೆ. ಇದು ಮಲಬದ್ಧತೆಯನ್ನು ಹೋಗಲಾಡಿಸುತ್ತದೆ. ೪) ನಾರು-ಬೇರುಗಳು ಸಣ್ಣಕರುಳಿನಲ್ಲಿ ಮೇದಸ್ಸನ್ನು ತಳ್ಳಿಕೊಂಡು ಹೋಗಿಬಿಡುತ್ತವೆ. ಆದ್ದರಿಂದ ರಕ್ತಕ್ಕೆ ಸೇರುವ ಕೊಲೆಸ್ಟರಾಲ್ ಕಡಿಮೆಯಾಗುತ್ತದೆ. ಇದರಿಂದ ರಕ್ತದೊತ್ತಡ, ಹೃದಯಾಘಾತ, ಮುಂತಾದವು ಕಡಿಮೆಯಾಗುತ್ತವೆ. ೫) ಸಕ್ಕರೆಯು ರಕ್ತಕ್ಕೆ ಸೇರುವ ವೇಗವನ್ನು ನಾರು-ಬೇರುಗಳು ಕಡಿಮೆಮಾಡುತ್ತವೆ. ಅಲ್ಲದೆ, ಕೆಲವು ನಾರು-ಬೇರುಗಳು ಆಹಾರದ ಜಿಗುಟುತನವನ್ನು(ವಿಸ್ಕೋಸಿಟಿ) ಹೆಚ್ಚಿಸುತ್ತವೆ. ಈ ಜಿಗುಟಿನಿಂದ ಕೂಡಿದ ಆಹಾರಕ್ಕೆ ಕಡಿಮೆ ಇನ್ಸುಲಿನ್ ಸಾಕಾಗುತ್ತದೆ. ಹಣ್ಣಂಟು ಮತ್ತು ಸಸ್ಯಗೋಂದು ರಕ್ತದಲ್ಲಿನ ಗ್ಲೂಕೋಸನ್ನು ಕಡಿಮೆ ಮಾಡುತ್ತವೆ. ರಾಗಿಯಲ್ಲಿನ ಪಿಷ್ಟ, ಅಕ್ಕಿಯಲ್ಲಿನ ಪಿಷ್ಟಕ್ಕಿಂತ ನಿಧಾನವಾಗಿ ಗ್ಲೂಕೋಸ್ ಆಗುತ್ತದೆ. ಕಾರಣ ಅದರಲ್ಲಿನ ಹೊಟ್ಟು. ಅದಕ್ಕಾಗಿಯೇ ಸಕ್ಕರೆ ರೋಗಿಗಳಿಗೆ ಅಕ್ಕಿಗಿಂತ ರಾಗಿ ಉತ್ತಮವೆನಿಸುವುದು. ಈ ಕಾರಣಗಳಿಂದ ಸಕ್ಕರೆ ರೋಗದಲ್ಲಿ ನಾರು-ಬೇರುಗಳು ಸಹಾಯಮಾಡುತ್ತವೆ. ಜೀವಕಣತಂತುಕ (ಸೆಲ್ಯೂಲೋಸ್) : ಇದು ಹಣ್ಣು, ತರಕಾರಿಗಳು, ಹೊಟ್ಟು, ಕಾಯಿಗಳಲ್ಲಿದೆ. ಇದು ನೀರಿನಲ್ಲಿ ಕರಗದ ನಾರು-ಬೇರು. ಇದು ನೀರನ್ನು ತಡೆಹಿಡಿದಿಟ್ಟುಕೊಂಡು ತನ್ನ ಗಾತ್ರವನ್ನು ಹೆಚ್ಚಿಸಿಕೊಳ್ಳುತ್ತದೆ. ಏಕಾಣುಜೀವಿಯಿಂದ ಇದೇ ಮೃದುವಾಗುವುದು. ಇದು ಕರುಳಿನ ಕ್ಯಾನ್ಸರ್ ಉಂಟುಮಾಡುವ ವಿಷ ವಸ್ತುವನ್ನು ಹೊರದೂಡುತ್ತದೆ. ತೂಕವನ್ನು ಇಳಿಸುತ್ತದೆ. ಮಲಬದ್ಧತೆ ನಿವಾರಣೆಯಾಗುತ್ತದೆ. ಹಣ್ಣಂಟು (ಪೆಕ್ಟಿನ್) : ಈ ಜಾತಿಯ ನಾರು-ಬೇರು ರಕ್ತದ ಕೊಲೆಸ್ಟರಾಲನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಹೆಗ್ಗರುಳಿನ ಏಡಿಗಂತಿ(ಕ್ಯಾನ್ಸರ್) ಮತ್ತು ಪಿತ್ತಕಲ್ಲು(ಗಾಲ್ ಸ್ಟೋನ್) ಆಗುವುದನ್ನು ತಡೆಯುತ್ತದೆ. ಇದು ಮಲ ಮೃದುವಾಗುವುದರಲ್ಲಿ ಸಹಾಯಮಾಡುವುದಿಲ್ಲ. ಆದ್ದರಿಂದ ಮಲಬದ್ಧತೆಯಲ್ಲಿ ಇದರ ಕಾರ್ಯ ಕಡಿಮೆ. ಇದು ಸೇಬು, ದ್ರಾಕ್ಷಿ, ಹುಳಿಹಣ್ಣುಗಳು, ಪಪಾಯಿ, ಸೀಬೆ, ಬಾಳೆ, ಹೊಟ್ಟು ಇವುಗಲ್ಲಿದೆ. ಗೋಂದು ಮತ್ತು ಅಂಟು :

Leave a Reply