ಯುಗಾದಿ
– ದ. ರಾ. ಬೇಂದ್ರೆ
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಂಗೆ ಹೂವ ತೊಂಗಳಲ್ಲಿ ಭೃಂಗದ ಸಂಗೀತ ಕೇಳಿ ಮತ್ತೆ ಕೇಳಬರುತಿದೆ
ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ
ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾಲಕೆ
ಒಂದೆ ಒಂದು ಜನ್ಮದಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೆ ಏತಕೋ
ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ
ಎಲೇ ಸನತ್ಕುಮಾರದೇವ ಎಲೇ ಸಾಹಸಿ ಚಿರಂಜೀವ ನಿನಗೆ ಲೀಲೆ ಸೇರದೋ
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ನಮ್ಮನಷ್ಟೆ ಮರೆತಿದೆ
November 1st, 2012 at 9:04 am
ever green song…….