Kannada Lyrics in Kannada

Kannada Lyrics in Kannada

ಮೈಸೂರು ಮಲ್ಲಿಗೆ (1992) ದೀಪವು ನಿನ್ನದೆ ಗಾಳಿಯು ನಿನ್ನದೆ
ಕೆ.ಎಸ್. ನರಸಿಂಹಸ್ವಾಮಿ ಚಿತ್ರಗೀತೆ ಚಿತ್ರಗೀತೆಯಲ್ಲಿ ಕವನ ಭಾವಗೀತೆ ಮೈಸೂರ ಮಲ್ಲಿಗೆ ಮೈಸೂರು ಮಲ್ಲಿಗೆ ೧೯೯೨
ಸಾಹಿತ್ಯ: ಕೆ. ಎಸ್. ನರಸಿಂಹಸ್ವಾಮಿಸಂಗೀತ: ಸಿ. ಎಸ್. ಅಶ್ವಥ್ಗಾಯನ: ಎಸ್. ಪಿ. ಬಾಲಸುಬ್ರಮಣ್ಯಂ

ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕು
ಕಡಲೂ ನಿನ್ನದೆ, ಹಡಗೂ ನಿನ್ನದೆ
ಮುಳುಗದಿರಲಿ ಬದುಕು
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕು

ಬೆಟ್ಟವು ನಿನ್ನದೆ, ಬಯಲೂ ನಿನ್ನದೆ
ಹಪ್ಪಿನದಲಿ ಪ್ರೀತಿ
ನೆಳಲೋ ಬಿಸಿಲೋ
ಎಲ್ಲವೂ ನಿನ್ನವೆ
ನೆಳಲೋ ಬಿಸಿಲೋ
ಎಲ್ಲವೂ ನಿನ್ನವೆ
ಇರಲಿ ಏಕ ರೀತಿ
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕು

ಆಗೊಂದು ಸಿಡಿಲು
ಈಗೊಂದು ಮುಗಿಲು
ನಿನಗೆ ಅಲಂಕಾರ
ಅಲ್ಲೊಂದು ಹಕ್ಕಿ
ಇಲ್ಲೊಂದು ಮುಗುಳು
ಅಲ್ಲೊಂದು ಹಕ್ಕಿ
ಇಲ್ಲೊಂದು ಮುಗುಳು
ನಿನಗೆ ನಮಸ್ಕಾರ
ಕಡಲೂ ನಿನ್ನದೆ,
ಹಡಗೂ ನಿನ್ನದೆ
ಮುಳುಗದಿರಲಿ ಬದುಕು

ಅಲ್ಲಿ ರಣದುಂದುಭಿ, ಇಲ್ಲೊಂದು ವೀಣೆ
ನಿನ್ನ ಪ್ರತಿಧ್ವನಿ
ಆ ಮಹಾ ಕಾವ್ಯ, ಈ ಭಾವ ಗೀತೆ
ನಿನ್ನ ಪದಧ್ವನಿ…
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕು
ಕಡಲೂ ನಿನ್ನದೆ, ಹಡಗೂ ನಿನ್ನದೆ
ಮುಳುಗದಿರಲಿ ಬದುಕು

ನೀ ಹೀಂಗ ನೋಡಬ್ಯಾಡ ನನ್ನ
ದ.ರಾ. ಬೇಂದ್ರೆ (ಅಂಬಿಕಾತನಯದತ್ತ) ನಾದಲೀಲೆ
ನೀ ಹೀಂಗ ನೋಡಬ್ಯಾಡ ನನ್ನ(ನಾದಲೀಲೆ – ಕವನ ಸಂಗ್ರಹ)

ನೀ ಹೀಂಗ ನೋಡಬ್ಯಾಡ ನನ್ನ
ನೀ ಹೀಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ಪಲ್ಲವಿ

ಸಂಸಾರ ಸಾಗರದಾಗ ಲೆಕ್ಕವಿಲ್ಲದಷ್ಟು ದುಃಖದ ಬಂಡಿ
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ
ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ
ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ಇತ್ತ?

ತಂಬಲs ಹಾಕದ ತುಂಬ ಕೆಂಪು ಗಿಡಗಡಕನಕಣ್ಣಿನ ಹಾಂಗ
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ
ಈ ಗದ್ದ, ಗಲ್ಲ, ಹಣಿ, ಕಣ್ಣುಕಂಡು ಮಾರೀಗೆ ಮಾರಿಯ ರೀತಿ
ಸಾವನs ತನ್ನ ಕೈ ಸವರಿತಲ್ಲಿ, ಬಂತೆನಗ ಇಲ್ಲದ ಭೀತಿ,

ಧಾರ್‍ಈಲೆ ನೆನೆದ ಕೈ ಹಿಡಿದೆ ನೀನು, ತಣ್ಣsಗ ಅಂತ ತಿಳಿದು
ಬಿಡವೊಲ್ಲಿ ಇನ್ನುನೂ, ಬೂದಿಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲsನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲಿ ಎಲ್ಲಿನ್ನs
ಆ ಗಾದಿ ಮಾತು ನಂಬಿ, ನಾನು ದೇವರಂತ ತಿಳಿದಿಯೇನ ನೀ ನನ್ನ.

ಇಬ್ಬನ್ನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗಿರುವ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs
ಹುಣ್ಣವೀ ಚಂದಿರನ ಹೆಣ ಬಂತೊ ಮುಗಿಲಾಗ ತೇಲತ ಹಗಲ!

ನಿನ ಕಣ್ಣಿನ್ಯಾಗ ಕಾಲೂರಿ ಮಳೆಯು, ನಡ ನಡಕ ಹುಚ್ಚನಗಿ ಯಾಕ?
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ
ಅತ್ತಾರ ಅತ್ತುಬಿಡು, ಹೊನಲು ಬರಲಿ, ನಕ್ಯಾಕ ಮರಸತೀ ದುಕ್ಕ?
ಎವೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿಕಚ್ಚಿ ಹಿಡಿಯದಿರು ಬಿಕ್ಕ

ನಾದಲೀಲೆ – ಕುರುಡು ಕಾಂಚಾಣ
ದ.ರಾ. ಬೇಂದ್ರೆ (ಅಂಬಿಕಾತನಯದತ್ತ) ನಾದಲೀಲೆ
ಕುರುಡು ಕಾಂಚಾಣ(ನಾದಲೀಲೆ – ಕವನ ಸಂಗ್ರಹ)

ಕುರುಡು ಕಾಂಚಾಣ ಕುಣಿಯುತಲಿತ್ತು
ಕಾಲಿಗೆ ಬಿದ್ದವರ ತುಳಿಯುತಲಿತ್ತೊs
ಕುರುಡು ಕಾಂಚಾಣ ಪಲ್ಲವಿ

ಬಾಣಂತಿಯೆಂಬಾ ಸಾ-
ಬಾಣದ ಬಿಳುಪಿನಾ
ಕಾಣದ ಕಿರುಗೆಜ್ಜೆ ಕಾಲಾಗೆ ಇತ್ತೋ

ಸಣ್ಣ ಕಂದಮ್ಮಗಳ
ಕಣ್ಣೀನ ಕವಡಿಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ;

ಬಡವರ ಒಲವಿನ
ಬಡಬಾsನಲದಲ್ಲಿ
ಸುಡು ಸುಡು ಪಂಜವು ಕೈಯೊಳಗಿತ್ತೊ;

ಕಂಬನಿ ಕುಡಿಯುವ
ಹುಂಬ ಬಾಯಿಲೆ ಮೈ-
ದುಂಬಿದಂತಧೊ ಉಧೊ ಎನ್ನುತ್ತಲಿತ್ತೊ;

ಕೂಲಿ ಕಂಬಳಿಯವರ
ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯೊಳಗಿತ್ತೊ;

ಗುಡಿಯೊಳಗೆ ಗಣಣ ಮಾ-
ಹಡಿಯೊಳಗೆ ತನನ ಅಂ-
ಗಡಿಯೊಳಗ ಝಣಣ ನುಡಿಗೊಡುತ್ತಿತ್ತೋ;

ಹ್ಯಾಂಗಾರೆ ಕುಣಿಕುಣಿದು
ಮಂಗಾಟ ನಡೆದಾಗ
ಅಂಗಾತ ಬಿತ್ತೋ, ಹೆಗಲಿ ಎತ್ತೋ.

ತನನಂ ತನನಂ (2006) – ಕಲಿತ ಹುಡುಗಿ ಕುದ್ರಿ ನಡಿಗಿ

ಕೆ. ಕಲ್ಯಾಣ್ ಚಿತ್ರಗೀತೆ ಜನಪದ ತನನಂ ತನನಂ ೨೦೦೬
ಚಿತ್ರ: ತನನಂ ತನನಂಸಾಹಿತ್ಯ:ಸಂಗೀತ: ಕೆ. ಕಲ್ಯಾಣ್ಗಾಯನ: ಗುರುರಾಜ್ ಹೊಸಕೋಟೆ

ಕಲಿತ ಹುಡುಗಿ ಕುದ್ರಿ ನಡಿಗಿ ನಡೆದ ಬರತಿತ್ತ
ಕಲಿತ ಹುಡುಗಿ ಚಿಗರಿ ನಡಿಗಿ ಬಳುಕಿ ಬ

Leave a Reply