ತಂತ್ರಜ್ಞಾನ: ನಾಳೆಗಳ ನಿರ್ಮಾಣ
Sunday, November 20th, 2016ಆಳ್ವಾಸ್ ನುಡಿಸಿರಿ – ೨೦೧೬ರಲ್ಲಿ ಮಾಡಿದ ಭಾಷಣದ ಪೂರ್ಣರೂಪ ಟಿ. ಜಿ. ಶ್ರೀನಿಧಿ ನಾಳೆಗಳನ್ನು ನಿರ್ಮಿಸುವಲ್ಲಿ ವಿದ್ಯಾಸಂಸ್ಥೆಗಳ ಪಾತ್ರ ಬಹಳ ಮಹತ್ವದ್ದು. ಅಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಸಂಸ್ಥೆಯೊಂದು ನಾಳೆಗಳ ನಿರ್ಮಾಣದ ಕುರಿತಾಗಿಯೇ ಈ ಸಮ್ಮೇಳನವನ್ನು ಆಯೋಜಿಸಿರುವುದು ಅತ್ಯಂತ ಸಮಂಜಸವಾಗಿದೆ. ಕಳೆದೆರಡು ದಿನಗಳಿಂದ ವಿವಿಧ ಕ್ಷೇತ್ರದ ನಾಳೆಗಳ ಕುರಿತ ಅನೇಕ ಸಂಗತಿಗಳನ್ನು, ಅನಿಸಿಕೆ-ಅಭಿಪ್ರಾಯಗಳನ್ನು ನಾವೆಲ್ಲ ತಿಳಿದುಕೊಂಡಿದ್ದೇವೆ. ಇದೀಗ ತಂತ್ರಜ್ಞಾನ ಕ್ಷೇತ್ರದ ನಾಳೆಗಳ ಕುರಿತು ಮಾತನಾಡುವ ಸಮಯ. ೨೦೦೦ನೇ ಸಾಲಿನಲ್ಲಿ ಜಾವೆದ್ ಅಖ್ತರ್ ಅವರಿಗೆ ಅತ್ಯುತ್ತಮ ಗೀತರಚನೆಗೆಂದು ಚಲನಚಿತ್ರ […]