ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ
Tuesday, November 8th, 2005ಡಾ| ಡಿ.ಕೆ. ಮಹಾಬಲರಾಜು
ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.